Breaking
8 Nov 2026, Sun

ಉಡುಪಿ: ಕಟಪಾಡಿಯಲ್ಲಿ ಸರಣಿ ಅಪಘಾತ; ನಾಲ್ಕು ಕಾರುಗಳು ಜಖಂ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿಯ ಕಲ್ಲಾಪು ಡೀವಿಯೇಷನ್‌ ಬಳಿ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರೊಂದು ಕಲ್ಲಾಪು ಡೀವಿಯೇಷನ್‌ ಬಳಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಕಾರುಗಳು ಒಂದಕ್ಕೊಂದು ಢಿಕ್ಕಿ ಹೊಡೆದಿವೆ ಎನ್ನಲಾಗಿದೆ. ಘಟನೆಯಲ್ಲಿ ನಾಲ್ಕು ಕಾರುಗಳು ಜಖಂಗೊಂಡಿವೆ.

ಅಪಘಾತದ ಬಳಿಕ ಜನನಿಬಿಡ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ರಸ್ತೆಯನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

Leave a Reply

Your email address will not be published. Required fields are marked *