Breaking
23 Sep 2026, Wed

ಮೈಸೂರಿನಲ್ಲಿ ‘ಸೆಲ್ಫಿ ವರಮಹಾಲಕ್ಷ್ಮಿ’ ಕಾರ್ಯಕ್ರಮ ಯಶಸ್ವಿ

ಮೈಸೂರು: ಮಹಿಳೆಯರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಹಾಗೂ ಸ್ವಾವಲಂಬನೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಚಿರ ಜೀವ ಸೇವಾ ಟ್ರಸ್ಟ್ (ರಿ.), PGRSS ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಹಾಗೂ ಸರ್ವಕಲ ಸೇವಾ ಟ್ರಸ್ಟ್ (ರಿ.) ವತಿಯಿಂದ ‘ಸೆಲ್ಫಿ ವರಮಹಾಲಕ್ಷ್ಮಿ’ ಕಾರ್ಯಕ್ರಮವನ್ನು ಸೆ.23ರಂದು ಮೈಸೂರಿನಲ್ಲಿ ಆಯೋಜಿಸಲಾಯಿತು.

ಹುಣಸೂರು–ಮೈಸೂರು ಮುಖ್ಯ ರಸ್ತೆಯ ಕೃಷ್ಣ ಬೇಕರಿ ಪಕ್ಕದಲ್ಲಿರುವ PGRSS ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಸಂಸ್ಥೆಯ ಅಧ್ಯಕ್ಷ ಯಾದವ್ ಹರೀಶ್, ಆರ್‌ಟಿಐ ಮಾಹಿತಿ ಪತ್ರಿಕೆಯ ಸಂಸ್ಥಾಪಕ ಅಧ್ಯಕ್ಷ ಅಮರ್ ಹಾಗೂ ಚಿರ ಜೀವ ಸೇವಾ ಟ್ರಸ್ಟ್ ಅಧ್ಯಕ್ಷ ರಕ್ತದಾನಿ ಮಂಜು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪರ್ಧಿಗಳಿಗೆ ಪ್ರಮಾಣಪತ್ರ ಹಾಗೂ ಉಡುಗೊರೆಗಳನ್ನು ನೀಡಿ ಗೌರವಿಸಲಾಯಿತು. ಮಹಿಳೆಯರು ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಪ್ರದರ್ಶಿಸಲು ಇಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆಯಾಗಿವೆ ಎಂದು ಆಯೋಜಕರು ತಿಳಿಸಿದರು.

ಮಹಿಳೆಯರು ಶಿಕ್ಷಣ, ಉದ್ಯೋಗ, ಸ್ವಯಂ ಉದ್ಯೋಗ, ಕಲೆ, ಕ್ರೀಡೆ ಹಾಗೂ ಸಾಮಾಜಿಕ ಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ತಿಳಿಸಲಾಯಿತು.

ಮುಂದಿನ ದಿನಗಳಲ್ಲಿಯೂ ಮಹಿಳೆಯರ ಪ್ರತಿಭೆಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಆಯೋಜಕರು ತಿಳಿಸಿದರು. ಕಾರ್ಯಕ್ರಮವು ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ನಡೆಯಿತು.

Leave a Reply

Your email address will not be published. Required fields are marked *