ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಕಳೆಂಜ ಗ್ರಾಮದ ನಂದಗೋಕುಲ ಗೋಶಾಲೆಯ ಗೋವುಗಳ ಗೋಗ್ರಾಸಕ್ಕಾಗಿ ₹10,506 ಧನಸಹಾಯ ನೀಡಲಾಯಿತು.

ಈ ಸಂದರ್ಭದಲ್ಲಿ ಗೋಶಾಲೆಯ ಗೋವುಗಳಿಗೆ ಮೇವು ಒದಗಿಸಲು ಧನಸಹಾಯ ನೀಡುವುದರೊಂದಿಗೆ ನರೇಂದ್ರ ಮೋದಿ ಅವರ ಆಯುರಾರೋಗ್ಯ ಹಾಗೂ ದೇಶದ ಸೇವೆಗೆ ಶಕ್ತಿ ದೊರೆಯಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಗೌಡ ಕಡಮ್ಮಾಜೆ ಫಾರ್ಮ್ಸ್ ಮೊಗ್ರು, ವಿನೀತ್ ಕೋಟ್ಯಾನ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ ಸೇರಿದಂತೆ ಮಂಡಲ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.



