Breaking
24 Sep 2026, Thu

ತ್ರೋಬಾಲ್ ಪಂದ್ಯಾಟದಲ್ಲಿ ಎಲ್‌ಸಿಆರ್ ವಿದ್ಯಾಸಂಸ್ಥೆಗೆ ಪ್ರಥಮ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಕ್ಯಪದವು: ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2026–27ರ ತ್ರೋಬಾಲ್ ಪಂದ್ಯಾಟವು ಸೆ.20ರಂದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನಡೆಯಿತು.

ಪಂದ್ಯಾಟದಲ್ಲಿ ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯರು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇದರೊಂದಿಗೆ ತಂಡವು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ವಿದ್ಯಾರ್ಥಿನಿಯರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ–ಶಿಕ್ಷಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಹಾಗೂ ಪೃಥ್ವಿರಾಜ್ ತರಬೇತಿ ನೀಡಿದ್ದರು.

Leave a Reply

Your email address will not be published. Required fields are marked *