Breaking
24 Sep 2026, Thu

ಬೆಳ್ತಂಗಡಿ: ಸೆ.29–30ರಂದು ₹31.04 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸಕ್ಕೆ ಚಾಲನೆ

ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ಕೇಂದ್ರ ಹಾಗೂ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಒಟ್ಟು ₹31.04 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಗಳು ಸೆ.29 ಮತ್ತು 30ರಂದು ನಡೆಯಲಿವೆ.

ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಹಾಗೂ 15ನೇ ಹಣಕಾಸು ಯೋಜನೆಯಡಿ (PM-ABHIM) ₹16.90 ಕೋಟಿ ವೆಚ್ಚದಲ್ಲಿ ಮಂಜೂರಾಗಿರುವ 26 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳ ಶಿಲಾನ್ಯಾಸ ನಡೆಯಲಿದೆ.

ಆದಿವಾಸಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ₹9 ಕೋಟಿ ವೆಚ್ಚದ ಎರಡು ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳ ಉದ್ಘಾಟನೆ ನಡೆಯಲಿದೆ.

MRPL ಸಂಸ್ಥೆಯ CSR ಅನುದಾನದಲ್ಲಿ ₹15 ಲಕ್ಷ ವೆಚ್ಚದ ಚಾರ್ಮಾಡಿ ಅಂಗನವಾಡಿ ಕೇಂದ್ರದ ಶಿಲಾನ್ಯಾಸ, ₹12 ಲಕ್ಷ ವೆಚ್ಚದ ಪೆರ್ಲಬೈಪಾಡಿ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ಕಾಮಗಾರಿಗೆ ಶಿಲಾನ್ಯಾಸ ಹಾಗೂ ₹12 ಲಕ್ಷ ವೆಚ್ಚದ ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಯ ಶೌಚಾಲಯ ಕಾಮಗಾರಿಯ ಉದ್ಘಾಟನೆ ನಡೆಯಲಿದೆ.

ವಿದ್ಯಾರ್ಥಿಗಳ ವಸತಿ ಸೌಲಭ್ಯ ಬಲಪಡಿಸುವ ನಿಟ್ಟಿನಲ್ಲಿ ₹2 ಕೋಟಿ ವೆಚ್ಚದ ನೂತನ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ₹2 ಕೋಟಿ ವೆಚ್ಚದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಲಿದೆ.

ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಸುಧಾರಿಸುವ ಉದ್ದೇಶದಿಂದ ₹75 ಲಕ್ಷ ವೆಚ್ಚದ ಮೂರು ಕಾಲುಸಂಕ ಕಾಮಗಾರಿಗಳಿಗೂ ಶಿಲಾನ್ಯಾಸ ನಡೆಯಲಿದೆ.

Leave a Reply

Your email address will not be published. Required fields are marked *