Breaking
25 Sep 2026, Fri

ಆನೇಕಲ್ನಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಬಿಸಿಎ ವಿದ್ಯಾರ್ಥಿನಿ ಸಾವು

ಆನೇಕಲ್: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾಂಕ್ರೀಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಿಸಿಎ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಆನೇಕಲ್ ಪಟ್ಟಣದ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ.


ಮೃತರನ್ನು ಅಕ್ಷರ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಇಂಚರಾ ಎಂದು ಗುರುತಿಸಲಾಗಿದೆ. ಇವರು ನಿತ್ಯ ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುತ್ತಿದ್ದರು.
ಗುರುವಾರ ಎಂದಿನಂತೆ ಬೈಕ್ನಲ್ಲಿ ಕಾಲೇಜಿಗೆ ತೆರಳಿದ್ದ ಇಂಚರಾ, ಕಾಲೇಜು ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಹೊಸೂರು ಮುಖ್ಯರಸ್ತೆಯ ಸವೇರಾ ಟೀ ಸ್ಟಾಲ್ ಬಳಿ ಈ ಅಪಘಾತ ಸಂಭವಿಸಿದೆ. ಹಿಂಬದಿಯಿಂದ ವೇಗವಾಗಿ ಬಂದ ಕಾಂಕ್ರೀಟ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡ ಇಂಚರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಅಪಘಾತಕ್ಕೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಬಳಿಕ ಆಕ್ರೋಶಗೊಂಡ ಕೆಲವರು ಲಾರಿಗೆ ಕಲ್ಲು ತೂರಾಟ ನಡೆಸಿದ್ದು, ವಾಹನದ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದು, ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *