ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಕಚೇರಿಯಲ್ಲಿ ಸೆ.25ರಂದು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸೀತಾರಾಮ್ ಬೌದ್ಧಿಕ್ ನಡೆಸಿಕೊಟ್ಟರು. ಅರವಿಂದ್ ಲಾಯಿಲ ಬಿಜೆಪಿ ಗೀತೆ ಹಾಡಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜನೆಯನ್ನು ನಗರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ಪ್ರಭು, ಯುವ ಮೋರ್ಚಾ ಉಪಾಧ್ಯಕ್ಷ ಗಣೇಶ್, ನಗರ ಶಕ್ತಿ ಕೇಂದ್ರದ ಪ್ರಕಾಶ್ ಆಚಾರ್ಯ, ವಿಶ್ವನಾಥ್ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.








