Breaking
26 Sep 2026, Sat

ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲು ಎಸ್‌ಡಿಎಂ ಪ್ರೌಢಶಾಲಾ ವಿದ್ಯಾರ್ಥಿನಿ ಸೃಜನ್ಯ ಪ್ರಥಮ

ಬೆಳಾಲು: ಕಲ್ಮಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಜನ್ಯ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಂಸದೀಯ ಮೌಲ್ಯಗಳು, ಪ್ರಜಾಸತ್ತಾತ್ಮಕ ಚಿಂತನೆ ಹಾಗೂ ಜಾಗೃತ ನಾಯಕತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಸ್ಪರ್ಧೆ ಆಯೋಜಿಸಲಾಗಿತ್ತು. ಸೃಜನ್ಯ ಅವರು ಅತ್ಯುತ್ತಮ ವಾಗ್ಮಿತೆ ಹಾಗೂ ನಿರೂಪಣಾ ಕೌಶಲ್ಯ ಪ್ರದರ್ಶಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಅವರು ಬೆಳ್ತಂಗಡಿ ತಾಲೂಕು ಹಾಗೂ ತಮ್ಮ ಶಾಲೆಯನ್ನು ಪ್ರತಿನಿಧಿಸಲಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *