ಬೆಳಾಲು: ಬೆಳಾಲು ಗ್ರಾಮದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ ಹಾಗೂ ಕಲ್ಪೋಕ್ತ ಪೂಜೆ ನೆರವೇರಿತು.

ಊರ ಹಾಗೂ ಪರವೂರ ಋತ್ವಿಜರಿಂದ ಲಕ್ಷ ತುಳಸಿ ಅರ್ಚನೆ ನಡೆಯಿತು. ಮಧ್ಯಾಹ್ನ ತುಳುನಾಡಿನ ಸಂಪ್ರದಾಯದಂತೆ ತೆನೆ ಕಟ್ಟುವ ಪೂಜೆ ನೆರವೇರಿಸಿ, ಬಳಿಕ ಭಕ್ತರಿಗೆ ತೆನೆ ವಿತರಿಸಲಾಯಿತು. ದೇವರಿಗೆ ಮಹಾಪೂಜೆ ಸಲ್ಲಿಸಿದ ಬಳಿಕ ಪ್ರಸಾದ ವಿತರಣೆ ನಡೆಯಿತು. ಸಮಸ್ತ ಭಕ್ತಾದಿಗಳಿಗೆ ಅನ್ನಸಂತರ್ಪಣೆಯನ್ನೂ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಅಸ್ರಣ್ಣರು, ಅರ್ಚಕರು, ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.









