ಬೆಳಾಲು: ಕಾರ್ಲ್ ಡೇವಿಡ್ ಮತ್ತು ಕೋಸೆಸ್ ಪಿಂಟೋ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಮಂಗಳೂರು ವತಿಯಿಂದ ನೀಡಲಾಗುವ ಸಹಾಯಕ ವಿದ್ಯಾರ್ಥಿವೇತನಕ್ಕೆ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯರಾದ ರಕ್ಷಾ ಹಾಗೂ ಹೇಮಲತಾ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿನಿಯರಿಗೆ ಸಂಸ್ಥೆಯ ವತಿಯಿಂದ ನೀಡಲಾದ ತಲಾ ₹3,000 ಮೊತ್ತದ ಚೆಕ್ ಹಾಗೂ ಪ್ರಮಾಣಪತ್ರವನ್ನು ಶಾಲೆಯ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಅವರು ವಿದ್ಯಾರ್ಥಿನಿಯರ ಪೋಷಕರಿಗೆ ಹಸ್ತಾಂತರಿಸಿ ಶುಭ ಹಾರೈಸಿದರು.
ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ವಿದ್ಯಾರ್ಥಿವೇತನ ನೀಡಿದ ಸಂಸ್ಥೆಗೆ ಶಾಲೆಯ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.








