Breaking
26 Sep 2026, Sat

ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಕುರ್ಚಿ, ಊಟದ ಟೇಬಲ್ ಕೊಡುಗೆ

ಬೆಳಾಲು: ಬೆಳಾಲು ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ₹60,000 ಮೌಲ್ಯದ ಕುರ್ಚಿಗಳು ಹಾಗೂ ಊಟದ ಟೇಬಲ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ಪ್ರತಿವರ್ಷ ದೀಪಾವಳಿ ಪ್ರಯುಕ್ತ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾಗುವ ಕೆಸರುಗದ್ದೆ ಕ್ರೀಡಾಕೂಟದ ಉಳಿಕೆ ಮೊತ್ತದಿಂದ ಈ ಕೊಡುಗೆಯನ್ನು ನೀಡಲಾಗಿದ್ದು, ಅನಂತ ಚತುರ್ದಶಿಯಂದು ದೇವಸ್ಥಾನದ ವ್ಯವಸ್ಥಾಪನಾ ಮಂಡಳಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಅನಂತೇಶ್ವರ ಫ್ರೆಂಡ್ಸ್‌ನ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *