ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ನ ಬಂಟ್ವಾಳ ತಾಲ್ಲೂಕು ಘಟಕದ 2076ನೇ ಮಧ್ಯವರ್ಜನಾ ಶಿಬಿರದ ತ್ರೈಮಾಸಿಕ ಸಭೆ ಹಾಗೂ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧದಲ್ಲಿ ನಡೆಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ-1 ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಸಭೆಯನ್ನು ಉದ್ಘಾಟಿಸಿ ನವಜೀವನ ಸಮಿತಿ ಸದಸ್ಯರಿಗೆ ಅಗತ್ಯ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.

ತಾಲ್ಲೂಕು ಯೋಜನಾಧಿಕಾರಿ ಜಯಾನಂದ ಪಿ. ಅವರು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಅಕ್ಟೋಬರ್ 2ರಂದು ನಡೆಯಲಿರುವ ಗಾಂಧಿ ಜಯಂತಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಸಭೆಯ ಸಂದರ್ಭದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನವಜೀವನ ಸಮಿತಿ ಸದಸ್ಯರು, ಸೇವಾಪ್ರತಿನಿಧಿಗಳು, ನವಜೀವನ ಸಮಿತಿ ಪೋಷಕರು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ಬಿ.ಸಿ.ರೋಡ್ ವಲಯದ ಸೇವಾಪ್ರತಿನಿಧಿ ಆಶಾಲತಾ ವಂದಿಸಿದರು.



