Breaking
29 Sep 2026, Tue

ಅ.18, 19ರಂದು ಇರ್ವತ್ತೂರು ಪದವಿನಲ್ಲಿ ‘ದಶಾರದ ಸಂಭ್ರಮ-2026’ ಲಾಂಛನ ಬಿಡುಗಡೆ

ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದಾ ಸೇವಾ ಟ್ರಸ್ಟ್, ಶ್ರೀ ಶಾರದೋತ್ಸವ ಸೇವಾ ಸಮಿತಿ ಹಾಗೂ ದಶಮಾನೋತ್ಸವ ಸಮಿತಿ ಆಶ್ರಯದಲ್ಲಿ ಅ.18 ಮತ್ತು 19ರಂದು ಇರ್ವತ್ತೂರುಪದವು ಮೂಡುಪಡುಕೋಡಿ ಉನ್ನತೀಕರಿಸಿದ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ‘ದಶಾರದ ಸಂಭ್ರಮ-2026’ ಕಾರ್ಯಕ್ರಮದ ಲಾಂಛನ ಬಿಡುಗಡೆ ಸಮಾರಂಭ ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು.

ಧಾರ್ಮಿಕ ಹಾಗೂ ಸಹಕಾರಿ ಕ್ಷೇತ್ರದ ಹಿರಿಯರಾದ ಕೆ. ಲಕ್ಷ್ಮೀನಾರಾಯಣ ಉಡುಪ ಅವರು ಲಾಂಛನ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ರಾಮಕೃಷ್ಣ ಎಸ್. ಮಾತನಾಡಿ, ದಶಮಾನೋತ್ಸವ ಕಾರ್ಯಕ್ರಮವು ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಸನ್ಮಾನ, ಪ್ರಶಸ್ತಿ ಪ್ರದಾನ, ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಕಲಾ ಕಾರ್ಯಕ್ರಮಗಳನ್ನು ಒಳಗೊಂಡಂತೆ ದಶಮಾನೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಮಾದರಿಯಾಗಿ ರೂಪಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಟಿ. ಹರೀಂದ್ರ ಪೈ, ಸಂಚಾಲಕ ಮೋಹನ್ ಶೆಟ್ಟಿ ನರ್ವಲ್ದಡ್ಡ, ಶ್ರೀ ಶಾರದೋತ್ಸವ ಸೇವಾ ಸಮಿತಿ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಎರ್ಮೆನಾಡು, ದಶಮಾನೋತ್ಸವ ಸಮಿತಿ ಸಂಚಾಲಕ ಸತೀಶ್ ಪೂಜಾರಿ ಬೆನಕ, ಸ್ಮರಣ ಸಂಚಿಕೆ ಸಮಿತಿ ಸಂಚಾಲಕ ಶೇಖರ ಪೂಜಾರಿ ಅಗಲ್ದೋಡಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋಪಾಲ ಅಂಚನ್, ಟ್ರಸ್ಟ್ ಕಾರ್ಯದರ್ಶಿ ದಯಾನಂದ ಎಸ್. ಎರ್ಮೆನಾಡು, ಸಮಿತಿ ಪ್ರಮುಖರಾದ ಶಂಕರ ಶೆಟ್ಟಿ ಬೆದ್ರಮಾರು, ಸತೀಶ್ ಕರ್ಕೆರಾ ಕಯ್ಯಾಬೆ, ಹರೀಶ್ ಪೂಜಾರಿ ಎರ್ಮೆನಾಡು, ಪ್ರಶಾಂತ್ ದೇವಾಡಿಗ, ಸುಪ್ರೀತ್ ಜೈನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *