Breaking
29 Sep 2026, Tue

ಅ.4ರಂದು ಪೆರ್ಲಿಯಾ ನರ್ಸಿಂಗ್ ಹೋಮ್‌ನಲ್ಲಿ ಉಚಿತ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ

ಕೈಕಂಬ: ಪೆರ್ಲಿಯಾ ನರ್ಸಿಂಗ್ ಹೋಮ್, ಕೈಕಂಬ, ಬಿ.ಸಿ.ರೋಡ್ ವತಿಯಿಂದ ಮಕ್ಕಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅ.4ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಆಯೋಜಿಸಲಾಗಿದೆ.

ಪೆರ್ಲಿಯಾ ನರ್ಸಿಂಗ್ ಹೋಮ್‌ನ ಮಕ್ಕಳ ತಜ್ಞರಾದ ಡಾ. ಡೈಲನ್ ಡಿಸೋಜಾ ಅವರ ನೇತೃತ್ವದಲ್ಲಿ ನಡೆಯುವ ಶಿಬಿರದಲ್ಲಿ ಮಕ್ಕಳ ಸಮಗ್ರ ಆರೋಗ್ಯ ತಪಾಸಣೆ ಹಾಗೂ ಅಗತ್ಯ ವೈದ್ಯಕೀಯ ಸಲಹೆಗಳನ್ನು ನೀಡಲಾಗುವುದು.

ಮಕ್ಕಳ ತೂಕ, ಬೆಳವಣಿಗೆ, ಸಾಮಾನ್ಯ ಆರೋಗ್ಯ ತಪಾಸಣೆ ಸೇರಿದಂತೆ ಜ್ವರ, ಕೆಮ್ಮು, ನೆಗಡಿ, ಅತಿಸಾರ, ಅಲರ್ಜಿ, ಜೀರ್ಣಕ್ರಿಯೆ ಸಂಬಂಧಿತ ಸಮಸ್ಯೆಗಳ ಕುರಿತು ತಪಾಸಣೆ ನಡೆಸಿ ವೈದ್ಯಕೀಯ ಸಲಹೆ ನೀಡಲಾಗುತ್ತದೆ. ಮಕ್ಕಳ ಆಹಾರ, ಪೌಷ್ಟಿಕಾಂಶ, ಲಸಿಕೆ ಹಾಗೂ ಆರೋಗ್ಯಕರ ಬೆಳವಣಿಗೆ ಕುರಿತು ಪೋಷಕರಿಗೆ ಅಗತ್ಯ ಮಾರ್ಗದರ್ಶನವೂ ದೊರೆಯಲಿದೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶಿಬಿರದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ವೈದ್ಯರ ಸಲಹೆ ಲಭ್ಯವಿರುತ್ತದೆ. ವೈದ್ಯರು ಸೂಚಿಸುವ ರಕ್ತ ಪರೀಕ್ಷೆ, ಎಕ್ಸ್‌ರೇ ಸೇರಿದಂತೆ ಅಗತ್ಯ ಪ್ರಯೋಗಾಲಯ ಪರೀಕ್ಷೆಗಳಿಗೆ ಶೇ.40ರಷ್ಟು ವಿಶೇಷ ರಿಯಾಯಿತಿ ನೀಡಲಾಗುವುದು.

ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ಹೊಂದಿರುವ ಪೋಷಕರು ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪೆರ್ಲಿಯಾ ನರ್ಸಿಂಗ್ ಹೋಮ್ ವತಿಯಿಂದ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *