Breaking
29 Sep 2026, Tue

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಬಯಲು ಗಣಪತಿ ಕ್ಷೇತ್ರವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸೆ.29ರಂದು ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಬೆಳ್ತಂಗಡಿ ತಾಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಗಳ ನಿಮಿತ್ತ ತಾಲೂಕಿಗೆ ಆಗಮಿಸಿದ್ದ ಸಂಸದರು ಹಾಗೂ ಶಾಸಕರು, ಸಂಕಷ್ಟ ಚತುರ್ಥಿಯ ಶುಭ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರಂಕಿ, ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಶರತ್, ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ ನಾರಾಯಣ್ ಚಾರ್ಮಾಡಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಕೊಕ್ಕಡ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಯೋಗೀಶ್ ಗೌಡ ಅಳಂಬಿಲ, ಬಾಲಕೃಷ್ಣ ನೈಮಿಷ, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ ಕೊಯಿಲ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್ ಗೌಡ ಪುದುವೆಟ್ಟು, ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ., ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಶರತ್ ಶೆಟ್ಟಿ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ರಂಜಿತ್ ಕೊಕ್ಕಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *