ಬೆಳ್ತಂಗಡಿ: ಇತ್ತೀಚೆಗೆ ಉತ್ತಮ ಶಾಸಕ ಪುರಸ್ಕಾರ ಪಡೆದ ಶಾಸಕ ಹರೀಶ್ ಪೂಂಜಾ ಅವರನ್ನು ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ ಹಾಗೂ ಭಂಡಾರಿ ಯುವವೇದಿಕೆ ವತಿಯಿಂದ ಗೌರವಿಸಲಾಯಿತು.

ಭಂಡಾರಿ ಸಮಾಜ ಸಂಘ ಹಾಗೂ ಯುವವೇದಿಕೆಯ ಪದಾಧಿಕಾರಿಗಳು ಸೆ.28ರಂದು ಶಾಸಕರನ್ನು ಭೇಟಿಯಾಗಿ ಗೌರವಾರ್ಪಣೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅಕ್ಟೋಬರ್ 20ರಂದು ಉಜಿರೆಯಲ್ಲಿ ನಡೆಯಲಿರುವ ಭಂಡಾರಿ ಸಮಾಜದ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಪೂವಪ್ಪ ಭಂಡಾರಿ ಮದ್ದಡ್ಕ, ಯುವವೇದಿಕೆ ಅಧ್ಯಕ್ಷ ಪ್ರಶಾಂತ್ ಭಂಡಾರಿ ಅಂಡಿಂಜೆ, ಸಮಾಜದ ಹಿರಿಯರಾದ ಏ. ಪೂವಪ್ಪ ಭಂಡಾರಿ ಪಣೆಜಾಲು ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಬಂಧುಗಳು ಉಪಸ್ಥಿತರಿದ್ದರು.





