Breaking
29 Sep 2026, Tue

ವಿಟಿಯು ಘಟಿಕೋತ್ಸವ: ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರಿಗೆ ಪ್ರಥಮ, ದ್ವಿತೀಯ ಮತ್ತು 5ನೇ ರ‍್ಯಾಂಕ್

ಮಂಗಳೂರು: ಮಂಗಳೂರಿನ ನಡುಪದವಿನ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ (PACE) ಬಯೋಟೆಕ್ನಾಲಜಿ ವಿಭಾಗದ ವಿದ್ಯಾರ್ಥಿನಿಯರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ರ‍್ಯಾಂಕ್ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸೆ.26ರಂದು ನಡೆದ ವಿಟಿಯುವಿನ 26ನೇ ವಾರ್ಷಿಕ ಘಟಿಕೋತ್ಸವದಲ್ಲಿ ಬಯೋಟೆಕ್ನಾಲಜಿ ವಿಭಾಗದ ವಿದ್ಯಾರ್ಥಿನಿ ಕುಮಾರಿ ಸಲಿಲಾ ಅವರು ಬಿ.ಇ. ಬಯೋಟೆಕ್ನಾಲಜಿ ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕಕ್ಕೆ ಭಾಜನರಾದರು.

ಇದೇ ವಿಭಾಗದ ಕುಮಾರಿ ವಿದ್ಯಾ ಜೆ. ಅವರು ದ್ವಿತೀಯ ರ‍್ಯಾಂಕ್ ಹಾಗೂ ಕುಮಾರಿ ಆಯಿಷಾ ಅಫ್ರಾ ಅವರು 5ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ರ‍್ಯಾಂಕ್ ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿ, ಅವರ ಪರಿಶ್ರಮವನ್ನು ಶ್ಲಾಘಿಸಿದ್ದಾರೆ.

Leave a Reply

Your email address will not be published. Required fields are marked *