ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ನಡೆಯಲಿರುವ 7ನೇ ವರ್ಷದ ‘ದೀಪಾವಳಿ ದೋಸೆ ಹಬ್ಬ-2026’ ಹಾಗೂ ಡ್ರಗ್ಸ್ ವಿರುದ್ಧದ ಅಭಿಯಾನ ಮ್ಯಾರಥಾನ್ ಕಾರ್ಯಕ್ರಮದ ಪೂರ್ವಭಾವಿ ಸಭೆ ಸೆ.28ರಂದು ಶಾಸಕ ಹರೀಶ್ ಪೂಂಜಾ ಅವರ ನಿವಾಸ ಮಿಥಿಲಾದಲ್ಲಿ ನಡೆಯಿತು.


ಶಾಸಕ ಹರೀಶ್ ಪೂಂಜಾ ಅವರ ಮಾರ್ಗದರ್ಶನದಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ಆಯೋಜನೆ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ವಿನೀತ್ ಕೋಟ್ಯಾನ್ ಸಾವ್ಯ ಹಾಗೂ ಜಯಪ್ರಸಾದ್ ಗೌಡ ಕಡಮ್ಮಾಜೆ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಪೂಜಾರಿ ಮುಜ್ಜಾಳೆ, ಸುಜಿತ್ ಪೆರಾಡಿ, ಹರೀಶ್ ಗೌಡ ಸಂಬೊಲ್ಯ, ಕಾರ್ಯದರ್ಶಿಗಳಾದ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, ಜಗದೀಶ್ ಹೆಗ್ಡೆ ಕನ್ನಾಜೆ, ಕೋಶಾಧಿಕಾರಿ ಸ್ವಸ್ತಿಕ್ ಗೌಡ ಹಟತ್ತೋಡಿ ಕುಕ್ಕಳ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾದ ಅವಿನಾಶ್ ಹೊಸಂಗಡಿ, ಅಶ್ವಿನ್ ಅಂಡಿಂಜೆ, ಪ್ರಸಾದ್ ಸುದೇಮುಗೇರು, ಮನೀಷ್ ಡಿ.ಎ. ಧರ್ಮಸ್ಥಳ, ಜಯಕುಮಾರ್ ಶಿರ್ಲಾಲು, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಂಚಾಲಕರಾದ ಲೋಕ್ಷತ್ ಗೌಡ ಅನಿಲ ಬಂದಾರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.



