ಬಂಟ್ವಾಳ: ನ್ಯಾಯಾಲಯದ ಪ್ರಕ್ರಿಯೆ ಹಾಗೂ ಕಾನೂನು ನಡಾವಳಿಗಳ ಕುರಿತು ಸಾರ್ವಜನಿಕರಿಗೆ ತಪ್ಪು ಮತ್ತು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ವಕೀಲ ಪ್ರಸಾದ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಡಗಬೆಳ್ಳೂರು ನಿವಾಸಿ ಹನೀಫ್ (43) ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಿ.ಸಿ.ರೋಡ್ನಲ್ಲಿ ಧಾರ್ಮಿಕ ಸಂಘಟನೆಯೊಂದರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ವಕೀಲ ಪ್ರಸಾದ್ ಭಾಷಣ ಮಾಡಿದ್ದರು. ಈ ವೇಳೆ ನ್ಯಾಯಾಲಯದ ವಿಚಾರಣೆ, ಕಾನೂನು ಪ್ರಕ್ರಿಯೆ ಹಾಗೂ ನಡಾವಳಿಗಳಿಗೆ ಸಂಬಂಧಿಸಿದಂತೆ ವಾಸ್ತವಾಂಶಕ್ಕೆ ವಿರುದ್ಧವಾದ ಮಾಹಿತಿಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ ಬಂಟ್ವಾಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.





