Breaking
30 Sep 2026, Wed

ಸುರಕ್ಷಿತ ಸಮಾಜ ನಿರ್ಮಾಣದಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ತರ : ಪ್ರಭಾಕರ ಪ್ರಭು

ಬಂಟ್ವಾಳ: ಸಮಾಜದಲ್ಲಿ ಅಶಾಂತಿ ಉಂಟಾಗಿ ಸಂವಿಧಾನದಲ್ಲಿ ರೂಪಿತವಾದ ಕಾನೂನನ್ನು ಪ್ರಜೆಗಳು ಪಾಲನೆ ಮಾಡುವಲ್ಲಿ ವಿಫಲಗೊಂಡಾಗ ಪೊಲೀಸ್ ಇಲಾಖೆಯು ಅಗತ್ಯ ಮಾರ್ಗದರ್ಶನ ಮತ್ತು ರಕ್ಷಣೆ ನೀಡುವುದರೊಂದಿಗೆ ಸುರಕ್ಷಿತ ಸಮಾಜ ನಿರ್ಮಾಣಗೊಳ್ಳುವಲ್ಲಿ ಪೊಲೀಸ್ ಅಧಿಕಾರಿಗಳು ಮಹತ್ತರ ಪಾತ್ರ ವಹಿಸಿ ಅಗತ್ಯ ಕ್ರಮ ಕೈಗೊಂಡಾಗ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯು ನೆಲೆಸಲು ಸಾಧ್ಯ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದೂ ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಅಭಿಪ್ರಾಯ ಪಟ್ಟರು.

ಅವರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಇದೀಗ ಸಹಾಯಕ ಪೊಲೀಸ್ ಉಪ ನಿರೀಕ್ಷರಾಗಿ ಭಡ್ತಿಗೊಂಡಿರುವ ಸಂಘದ ಸದಸ್ಯರಾಗಿರುವ ಹರೀಶ್ ಸಿದ್ದಕಟ್ಟೆರವರನ್ನು ಸಂಘದ ಬೆಳ್ಳಿಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಸಂಘದ ವತಿಯಿಂದ ಅಭಿನಂದಿಸಿ, ಗೌರವರ್ಪಣೆ ಸಲ್ಲಿಸಿ ಮಾತಾನಾಡಿದರು.

ಸಂಘದ ಉಪಾಧ್ಯಕ್ಷ ಸಂದೇಶ ಶೆಟ್ಟಿ, ನಿರ್ದೇಶಕರಾದ ರಶ್ಮಿತ್ ಶೆಟ್ಟಿ, ದಿನೇಶ್ ಪೂಜಾರಿ ಭಡ್ತಿಗೊಂಡ ಹರೀಶ್ ರವರ ಪ್ರಾಮಾಣಿಕ ಪೊಲೀಸ್ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಹರೀಶ್ ರವರು ಮಾತನಾಡಿ ತನ್ನ ಹುಟ್ಟೂರಾದ ಸಿದ್ದಕಟ್ಟೆಯಲ್ಲಿ ನನಗೆ ಸಂದ ಗೌರವ ಅಭಿನಂದನೆ ಇತರ ಎಲ್ಲಾ ಗೌರವಕ್ಕಿಂತಲೂ ಮಿಗಿಲಾದದ್ದು ಹಾಗೂ ಸಂಘದ ಸದಸ್ಯನೊಬ್ಬನಿಗೆ ಈ ರೀತಿಯಲ್ಲಿ ಅಭಿನಂದನೆ ಸಲ್ಲಿಸುವ ಸಹಕಾರ ಸಂಘದ ಯೋಚನೆ ಮತ್ತು ಬದ್ಧತೆಗೆ ಅಭಾರಿಯಾಗಿದ್ದೇನೆ ಎಂದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಸತೀಶ್ ಪೂಜಾರಿ, ಚಂದ್ರಶೇಖರ ಶೆಟ್ಟಿ,ವಿಶ್ವನಾಥ್ ಶೆಟ್ಟಿಗಾರ್, ವೀರಪ್ಪ ಪರವ, ಜಾರಪ್ಪ ನಾಯ್ಕ, ಮಂದಾರತಿ ಎಸ್ ಶೆಟ್ಟಿ, ಪುಷ್ಪಲತಾ ಎಸ್ ಆರ್, ಶಿವ ಗೌಡ, ರಾಜೇಶ್ ಶೆಟ್ಟಿ, ನವೀನ ಹೆಗ್ಡೆ, ಎಸ್ ಸಿ ಡಿ ಸಿ ಸಿ ಬ್ಯಾಂಕ್ ಮೇಲ್ವಿಚಾರಕರಾದ ಕೀರ್ತಿರಾಜ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಸಂಘದ ಸದಸ್ಯರಾದ ಬಾಬುರಾಜೇಂದ್ರ ಶೆಟ್ಟಿ ಅಜ್ಜಾಡಿ, ಚಂದಯ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಸಿಬ್ಬಂದಿ ಸುಭಾಸ್ ಬಂಗೇರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *