Breaking
30 Sep 2026, Wed

ದಿ. ಐತಪ್ಪ ಗೌಡರ ಮನೆಗೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ ಭೇಟಿ

ಕಳೆಂಜ: ಇತ್ತೀಚೆಗೆ ನಿಧನರಾದ ಕಳೆಂಜ ಗ್ರಾಮದ ಕಾಯರ್ತಡ್ಕ ಅಂಗರಂಡ ನಿವಾಸಿ ಹಾಗೂ ಗ್ರಾಮದ ಗುತ್ತು ಗೌಡರಾದ ದಿ. ಐತಪ್ಪ ಗೌಡ ಅವರ ಮನೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಮೃತರ ಪತ್ನಿ, ಪುತ್ರ ಹಾಗೂ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ ಅವರು ಕುಟುಂಬಕ್ಕೆ ಧೈರ್ಯ ತುಂಬಿದರು. ಮೃತರ ಪುತ್ರ ಹಾಗೂ ಬೆಳ್ತಂಗಡಿ ಮಂಡಲ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ಯೋಗೀಶ್ ಗೌಡ ಅವರೊಂದಿಗೆ ಕೂಡ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ‘ಮನ್ ಕೀ ಬಾತ್’ ಸಂಚಾಲಕ ಸೀತಾರಾಮ್ ಬಿ.ಎಸ್. ಬೆಳಾಲು, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಗೌಡ ಕೊಯಿಲ, ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ಎಂ.ಕೆ., ಮಂಡಲ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರೇಮಚಂದ್ರ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇಂಖ್ಯಾರ್, ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಚಂದ್ರಕಾಂತ್ ಗೌಡ ನಿಡ್ಡಾಜೆ, ಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ್ ಗೌಡ ಡೆಚ್ಚಾರು, ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *