Breaking
1 Oct 2026, Thu

ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅ.11ರಿಂದ ನವರಾತ್ರಿ ಮಹೋತ್ಸವ

ಬೆಳ್ತಂಗಡಿ: ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ನವರಾತ್ರಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.


ನವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ಪ್ರತಿದಿನ ವಿಶೇಷ ನವರಾತ್ರಿ ಪೂಜೆ, ರಂಗಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದ್ದು, ವಿವಿಧ ಭಕ್ತರು ಸೇವಾರ್ಥಿಗಳಾಗಿ ಭಾಗವಹಿಸಲಿದ್ದಾರೆ.
ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ, ಪೂಂಜ ವತಿಯಿಂದ ಪ್ರತಿದಿನ ರಾತ್ರಿ 7 ಗಂಟೆಗೆ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯಲಿದೆ.
ನವರಾತ್ರಿ ವಿಶೇಷ ಪೂಜೆ ಮಾಡಿಸಲು ಇಚ್ಛಿಸುವ ಭಕ್ತರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದು, ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. ಪೂಜೆ ಮಾಡಿಸುವ ಭಕ್ತರು ಮಧ್ಯಾಹ್ನ 11 ಗಂಟೆಗೆ ಹಾಗೂ ಸಂಜೆ ಪೂಜೆ ಸೇವಾರ್ಥಿಗಳು 6.30ಕ್ಕೆ ದೇವಸ್ಥಾನಕ್ಕೆ ಆಗಮಿಸಬೇಕು. ನವರಾತ್ರಿ ಪೂಜೆಯ ಸೇವಾ ಶುಲ್ಕ ರೂ.700 ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *