ಬೆಳ್ತಂಗಡಿ: ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕ ಪ್ರಭಾಕರ ಬಂಗೇರ ಅವರ ನಿವಾಸಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಪ್ರಭಾಕರ ಬಂಗೇರ ಅವರೊಂದಿಗೆ ಕುಶಲೋಪರಿ ವಿಚಾರಿಸಿ ಮಾತುಕತೆ ನಡೆಸಿದ ಸಂಸದರು ಹಾಗೂ ಶಾಸಕರು, ವಿವಿಧ ವಿಚಾರಗಳ ಕುರಿತು ಸಲಹೆ-ಸೂಚನೆಗಳನ್ನು ಪಡೆದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ ಹಾಗೂ ಜಯಾನಂದ ಗೌಡ ಪ್ರಜ್ವಲ್, ಮಂಡಲ ಕಾರ್ಯದರ್ಶಿ ಸುಂದರ ಹೆಗ್ಡೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ರಾಜೇಶ್ ಆರಂಬೋಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.




