ಬೆಳ್ತಂಗಡಿ: ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಶಾಸಕ ಹರೀಶ್ ಪೂಂಜಾ ಅವರ ಮಾರ್ಗದರ್ಶನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ನಡೆಯಲಿರುವ 2ನೇ ವರ್ಷದ ಊದುಪೂಜೆ ಹಾಗೂ ಪಿಲಿನಲಿಕೆ ಕಾರ್ಯಕ್ರಮದ ಲೋಗೋ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ.30ರಂದು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜಾ ಅವರು ಕಾರ್ಯಕ್ರಮದ ಲೋಗೋ ಹಾಗೂ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಅಕ್ಟೋಬರ್ 15ರಂದು ಊದುಪೂಜೆ ಹಾಗೂ ಅಕ್ಟೋಬರ್ 16ರಂದು ಪಿಲಿನಲಿಕೆ ಕಾರ್ಯಕ್ರಮವು ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಸಹಪ್ರಭಾರಿ ಜಯಂತ್ ಕೋಟ್ಯಾನ್ ಮರೋಡಿ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ವೇಣೂರು ಸಿಎ ಬ್ಯಾಂಕ್ ಅಧ್ಯಕ್ಷ ಸುಂದರ್ ಹೆಗ್ಡೆ, ಬಿಜೆಪಿ ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನೀತ್ ಸಾವ್ಯ, ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸದಸ್ಯ ರಾಜೇಶ್ ಆರಂಬೋಡಿ ಕುತ್ಯಾರು ಫ್ರೆಂಡ್ಸ್ ನ ಉಮೇಶ್ ಕುಲಾಲ್, ಪ್ರಕಾಶ್ ಆಚಾರ್ಯ, ಶರತ್ ಶೆಟ್ಟಿ, ಸ್ವಸ್ತಿಕ್, ಅರವಿಂದ ಲಾಯಿಲ, ಗಣೇಶ್ ಲಾಯಿಲ, ಕರುಣಾಕರ ಬಂಗೇರ, ಚಂದ್ರರಾಜ್, ಪವನ್ ಬಂಗೇರ, ಅಭಿಲಾಷ್ ಗೌಡ, ಜಗದೀಶ್ ಕನ್ನಾಜೆ, ಮಂಜುನಾಥ್ ವಿ, ದಿಗಂತ್ ಮತ್ತು ಸದಸ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.






