ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೆ ಬರೋಬ್ಬರಿ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಕನಕಮಜಲು ನಿವಾಸಿ ಸುರೇಂದ್ರ ಬಂಧಿತ ಆರೋಪಿ. ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಸಂಖ್ಯೆ 33/2021ರ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 354, 323, 324, 504 ಹಾಗೂ 506ರ ಅಡಿಯಲ್ಲಿ ಆರೋಪಿಯಾಗಿದ್ದ ಸುರೇಂದ್ರ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಆರೋಪಿಯ ಪತ್ತೆಗೆ ಮುಂದಾದ ಪೊಲೀಸರು ಆಲಟ್ಟಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಸುರೇಂದ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಳ್ಯ ಪೊಲೀಸ್ ಠಾಣೆಯ ಮುಖ್ಯ ಪೇದೆ ರಾಜು ನಾಯಕ್ ಡಿ., ಪೊಲೀಸ್ ಪೇದೆ ಸೋಮಯ್ಯ ಹಿರೇಮಠ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬಂಧನದ ಬಳಿಕ ಸುರೇಂದ್ರನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.





