Breaking
2 Oct 2026, Fri

ಡಾ. ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಡಾ. ಶಾಂತಾ ಪುತ್ತೂರು

ಕೋಟ: ಕಾರಂತ ಥೀಂ ಪಾರ್ಕ್ನಲ್ಲಿ ಸೆ. 26ರಂದು ನಡೆದ 5ನೇ ವರ್ಷದ ಡಾ. ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುತ್ತೂರಿನ ಕಬಕ ಸರಕಾರಿ ಪ್ರೌಢಶಾಲೆಯ ಸಾಹಿತಿ ಶಿಕ್ಷಕಿ ಡಾ. ಶಾಂತಾ ಪುತ್ತೂರು ಅವರಿಗೆ ಡಾ. ಶಿವರಾಮ ಕಾರಂತ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿ ಹಾಜಿ ಅಬ್ದುಲ್ಲಾ ಸಾಹೇಬ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂದೀಪ್ ಶೆಟ್ಟಿ ಸಾರಥ್ಯದ ಏಸ್ ಕ್ರೀಟ್ ಅಡೆಷನ್ಸ್ ಇಂಡಿಯಾ ಪ್ರೈ. ಲಿ. ಮತ್ತು ‘ಉಸಿರು ಕೋಟ’ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಆಯ್ಕೆಯಾದ ಶಿಕ್ಷಕರನ್ನು ಗೌರವಿಸಲಾಯಿತು.


ಉಡುಪಿ ಜಿಲ್ಲೆಯ ವಿದ್ಯಾಂಗ ಉಪನಿರ್ದೇಶಕ ಲೋಕೇಶ್ ಸಿ. ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕೋಟತಟ್ಟು ಗ್ರಾಮ ಪಂಚಾಯತ್ ಪಿಡಿಒ ರವೀಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ಪಿ. ಭಾಗವಹಿಸಿದ್ದರು. ವೇದಿಕೆಯಲ್ಲಿ ಗೀತಾನಂದ ಫೌಂಡೇಶನ್ನ ಆನಂದ ಸಿ. ಕುಂದರ್, ಏಸ್ ಕ್ರೀಟ್ ಅಡೆಷನ್ಸ್ನ ಸಂದೀಪ್ ಶೆಟ್ಟಿ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಶೋಕ ತೆಕ್ಕಟ್ಟೆ, ನಿವೃತ್ತ ಅಧಿಕಾರಿ ಶಿವರಾಮ್, ಟ್ರಸ್ಟಿಗಳಾದ ಸುಬ್ರಾಯ ಆಚಾರ್ ಹಾಗೂ ವಿವೇಕ ಬಾಲಕಿಯರ ಪ್ರೌಢಶಾಲೆಯ ಮುಖ್ಯಸ್ಥ ಪ್ರೇಮಾನಂದ ಉಪಸ್ಥಿತರಿದ್ದರು.
ಪ್ರಶಸ್ತಿ ಸ್ವೀಕರಿಸಿದ ಡಾ. ಶಾಂತಾ ಪುತ್ತೂರು ಅವರು ಈ ಸಂದರ್ಭದಲ್ಲಿ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಶಿಕ್ಷಕ ಸಂಯೋಜಕ ಸತೀಶ ವಡ್ಡರ್ಸೆ ಸ್ವಾಗತಿಸಿದರು. ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ವಂದಿಸಿದರು. ಶಿಕ್ಷಕಿ ನಾಗರತ್ನ ಗುಂಡ್ಮಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *