ಕಕ್ಯಪದವು: ಬಂಟ್ವಾಳ ತಾಲೂಕು ಮಟ್ಟದ 14ರಿಂದ 17ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಕು. ಧನ್ವಿತಾ ಜಾವಲಿನ್ (ಈಟಿ ಎಸೆತ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ, ಬಿ.ಸಿ.ರೋಡ್ ಇವರ ಸಂಯುಕ್ತ ಆಶ್ರಯದಲ್ಲಿ ಅ.1ರಂದು ಕ್ರೀಡಾಕೂಟ ನಡೆಯಿತು.

17ರ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿದ್ದ ಧನ್ವಿತಾ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ. ಅವರ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯ ಶಿಕ್ಷಕಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಪ್ರಥ್ವಿರಾಜ್ ಅವರ ತರಬೇತಿ ಮತ್ತು ಮಾರ್ಗದರ್ಶನವೂ ಕಾರಣವಾಗಿದೆ.



