Breaking
2 Oct 2026, Fri

ಪೋಲೊ ವಾಲ್ಟ್ ಸ್ಪರ್ಧೆಯಲ್ಲಿ ಸಾಧನೆ: ಮಾಣಿ ಕರ್ನಾಟಕ ಪ್ರೌಢಶಾಲೆಯ ವಿದ್ಯಾರ್ಥಿ ಮಹಮ್ಮದ್ ರಿಯಾಫ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ತಾಲೂಕು ಮಟ್ಟದ 14ರಿಂದ 17ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯ ವಿದ್ಯಾರ್ಥಿ ಮಹಮ್ಮದ್ ರಿಯಾಫ್ ಪೋಲೊ ವಾಲ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ, ಬಿ.ಸಿ.ರೋಡ್ ಇವರ ಸಂಯುಕ್ತ ಆಶ್ರಯದಲ್ಲಿ ಅ.1ರಂದು ಕ್ರೀಡಾಕೂಟ ನಡೆದಿದ್ದು 17ರ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿದ್ದ ಮಹಮ್ಮದ್ ರಿಯಾಪ್ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಅರ್ಹತೆ ಗಳಿಸಿದ್ದಾರೆ.

ಅವರ ಸಾಧನೆಗೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಶಾಲಾ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

ಪರ್ಲೊಟ್ಟು ಪಿ.ಕೆ. ಅಬ್ದುಲ್ ರಹಿಮಾನ್ ಮತ್ತು ರುಕಿಯಾ ದಂಪತಿಗಳ ತೃತೀಯ ಪುತ್ರನಾದ ಇವರು ತಮ್ಮ ಸ್ವಂತ ಅಭ್ಯಾಸ ಮತ್ತು ಪರಿಶ್ರಮ ಶಾಲಾ ಶಿಕ್ಷಕರ ಸಹಕಾರದಿಂದ ಈ ಸಾಧನೆ ಮಾಡಿದ್ದಾರೆ.

Leave a Reply

Your email address will not be published. Required fields are marked *