Breaking
3 Oct 2026, Sat

ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರಾವಿತ್‌ಗೆ ಕಂಚಿನ ಪದಕ

ಕಕ್ಯಪದವು: ಬಂಟ್ವಾಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎಲ್.ಸಿ.ಆರ್. ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರಾವಿತ್ ಪಿ. ಅವರು ಅಡೆತಡೆ ಓಟದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬಿ.ಸಿ.ರೋಡ್‌ನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಅ.2ರಂದು ನಡೆದ 14ರಿಂದ 17ರ ವಯೋಮಾನದ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

17ರ ವಯೋಮಾನದ ವಿಭಾಗದ ಅಡೆತಡೆ ಓಟದಲ್ಲಿ ಸ್ಪರ್ಧಿಸಿದ ಶ್ರಾವಿತ್ ಪಿ. ಅವರು ಅತ್ಯುತ್ತಮ ಪ್ರದರ್ಶನ ನೀಡಿ ತೃತೀಯ ಸ್ಥಾನ ಪಡೆದುಕೊಂಡರು.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಮುಖ್ಯಶಿಕ್ಷಕಿ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ವಿದ್ಯಾರ್ಥಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಣಾಕ್ಷಿ ಜಿ.ಕೆ. ಹಾಗೂ ಪೃಥ್ವಿರಾಜ್ ಅವರ ಪ್ರಯತ್ನವನ್ನು ಸಂಸ್ಥೆಯು ಶ್ಲಾಘಿಸಿದೆ.

Leave a Reply

Your email address will not be published. Required fields are marked *