Breaking
3 Oct 2026, Sat

ನಿನ್ನಿಪಡ್ಪು ಪರಿಶಿಷ್ಟ ಕಾಲೊನಿಯಲ್ಲಿ ಸ್ವಚ್ಛತಾ ಆಂದೋಲನ

ಬಂಟ್ವಾಳ: ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದ ನಿನ್ನಿಪಡ್ಪು ಪರಿಶಿಷ್ಟ ಕಾಲೊನಿಯಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಶುಕ್ರವಾರ ‘ಸ್ವಚ್ಛತಾ ಆಂದೋಲನ’ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಮಾತನಾಡಿದರು. ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸ್ವಚ್ಛತಾ ಕಾರ್ಯಗಳ ಮಹತ್ವವನ್ನು ಅವರು ವಿವರಿಸಿದರು.
ಈ ಸಂದರ್ಭದಲ್ಲಿ ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್. ರಾಡ್ರಿಗಸ್, ಉಮೇಶ್ ಬೋಳಂತೂರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *