ಮಂಗಳೂರು: ಜಪಾನ್‌ನ ನಾಗೋಯಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನ 4×400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಅರ್ಜುನ ಪ್ರಶಸ್ತಿ ವಿಜೇತೆ ಎಂ.ಆರ್. ಪೂವಮ್ಮ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಅಭಿನಂದಿಸಿದರು.

ಕರಾವಳಿಯ ಕೀರ್ತಿಯನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸಿ ತಾಯ್ನಾಡು ಮಂಗಳೂರಿಗೆ ಮರಳಿದ ಪೂವಮ್ಮ ಅವರನ್ನು ಶಾಸಕ ಹರೀಶ್ ಪೂಂಜ ಹಾಗೂ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಕಾರ್ಯಕರ್ತರೊಂದಿಗೆ ಭೇಟಿ ಮಾಡಿ ಗೌರವಿಸಿದರು.





