Breaking
5 Oct 2026, Mon

ಕಾರ್ಕಳ: ಬೈಪಾಸ್‌ ಬಳಿ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾರ್ಕಳ: ಬೈಪಾಸ್ ಬಳಿ ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 25 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ ಬೈಪಾಸ್ ಬಳಿ ಅ.4ರ ಭಾನುವಾರ ರಾತ್ರಿ ನಡೆದಿದೆ.

ಮೃತರನ್ನು ಸಾಣೂರಿನ ಕುಜುಮಾರ್ ಗುಡ್ಡೆ ನಿವಾಸಿ ವಿಘ್ನೇಶ್ ಆಚಾರ್ಯ (25) ಎಂದು ಗುರುತಿಸಲಾಗಿದೆ.

ಸಂಜೆ ಸುಮಾರು 7 ಗಂಟೆ ವೇಳೆಗೆ ಅಪಘಾತ ಸಂಭವಿಸಿದ್ದು, ವಿಘ್ನೇಶ್ ಅವರು ಸವಾರಿ ಮಾಡುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ವಿಘ್ನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *