Breaking
5 Oct 2026, Mon

ಪಂಜಿಕಲ್ಲು ಶಾಲಾ ಕಟ್ಟಡಕ್ಕೆ ಸಿಡಿಲು ಬಡಿತ: ತರಗತಿ ಕೊಠಡಿಗೆ ಹಾನಿ

ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಗ್ರಾಮದ ಪ್ರೌಢಶಾಲೆಯೊಂದರ ತರಗತಿ ಕೊಠಡಿಗೆ ಸೋಮವಾರ ಬೆಳಗ್ಗೆ ಸಿಡಿಲು ಬಡಿದು ಕಟ್ಟಡಕ್ಕೆ ಹಾನಿಯಾದ ಘಟನೆ ನಡೆದಿದೆ.

ಸೋಮವಾರ ಬೆಳಗ್ಗೆ ಪಂಜಿಕಲ್ಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದ ವೇಳೆ ಶಾಲಾ ಕಟ್ಟಡಕ್ಕೆ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ತರಗತಿ ಕೊಠಡಿಯ ಕಟ್ಟಡದ ಕೆಲವು ಭಾಗಗಳು ಹಾನಿಗೊಳಗಾಗಿದ್ದು, ಶಾಲೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿರುವುದಾಗಿ ತಿಳಿದುಬಂದಿದೆ.

ಸಿಡಿಲು ಬಡಿದ ಸಂದರ್ಭ ಶಾಲಾ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಿಂದ ಶಾಲೆಯ ತರಗತಿ ಚಟುವಟಿಕೆಗಳಿಗೂ ಅಡಚಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹಾನಿಗೊಳಗಾದ ಕೊಠಡಿಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಶಾಲಾ ಆಡಳಿತ ಮಂಡಳಿ ಮುಂದಾಗಿದೆ. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಸ್ಥಳ ಪರಿಶೀಲನೆ ಬಳಿಕ ಹಾನಿಯ ಪ್ರಮಾಣದ ಕುರಿತು ವರದಿ ಸಿದ್ಧಪಡಿಸುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *