ಪುತ್ತೂರು: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ ಹಾಗೂ ಪುತ್ತೂರಿನ ಖ್ಯಾತ ಉದ್ಯಮಿ ಸರಾಫ ಮುಳಿಯ ಶ್ಯಾಮ ಭಟ್ (81) ಅವರು ಅ.4ರಂದು ಪಾಂಗಳಾಯಿಯ ಸ್ವಗೃಹದಲ್ಲಿ ನಿಧನರಾದರು.

ಮೃತರು ಪುತ್ರರಾದ ಕೇಶವಪ್ರಸಾದ್ ಮುಳಿಯ, ಕೃಷ್ಣನಾರಾಯಣ ಮುಳಿಯ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಪುತ್ತೂರಿನಲ್ಲಿ ಆರಂಭಗೊಂಡ ಮುಳಿಯ ಜುವೆಲ್ಸ್ ಸಂಸ್ಥೆಯನ್ನು ಕೇಶವ ಭಟ್ ಅವರು ಸ್ಥಾಪಿಸಿದ್ದರು. ಬಳಿಕ ಸಂಸ್ಥೆಯ ಜವಾಬ್ದಾರಿಯನ್ನು ವಹಿಸಿಕೊಂಡ ಶ್ಯಾಮ ಭಟ್ ಅವರು ಅದನ್ನು ಮತ್ತಷ್ಟು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅವಧಿಯಲ್ಲಿ ಸಂಸ್ಥೆಯು ಮಡಿಕೇರಿ, ಬೆಂಗಳೂರು, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಗೂ ವಿಸ್ತರಣೆಯಾಯಿತು. ಇದೀಗ ಅವರ ಪುತ್ರರು ಸಂಸ್ಥೆಯ ಕಾರ್ಯಚಟುವಟಿಕೆಗಳನ್ನು ಮುಂದುವರಿಸುತ್ತಿದ್ದಾರೆ.

ಚಿನ್ನ, ಬೆಳ್ಳಿ ಹಾಗೂ ವಜ್ರದ ಆಭರಣಗಳ ವ್ಯಾಪಾರ ಕ್ಷೇತ್ರದಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದ ಶ್ಯಾಮ ಭಟ್ ಅವರು, ತಂದೆಯಿಂದ ಬಂದ ಉದ್ಯಮ ಪರಂಪರೆಯನ್ನು ಯಶಸ್ವಿಯಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.

ಅ.6ರಂದು ಬೆಳಗ್ಗೆ 8ರಿಂದ ಮಧ್ಯಾಹ್ನ 12ರವರೆಗೆ ಪಾಂಗಳಾಯಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.





