Breaking
6 Oct 2026, Tue

ಪೂವಮ್ಮಗೆ ₹5 ಕೋಟಿ ಪ್ರೋತ್ಸಾಹಧನ ನೀಡುವಂತೆ ಸಿಎಂಗೆ ಶಾಸಕ ಹರೀಶ್ ಪೂಂಜ ಪತ್ರ

ಬೆಳ್ತಂಗಡಿ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಿರುವ ಅರ್ಜುನ ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರಿಗೆ ₹5 ಕೋಟಿ ವಿಶೇಷ ಪ್ರೋತ್ಸಾಹಧನ ನೀಡುವಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.

ಪೂವಮ್ಮ ಅವರು ಸುದೀರ್ಘ ಅವಧಿಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶ ಹಾಗೂ ರಾಜ್ಯವನ್ನು ಪ್ರತಿನಿಧಿಸಿ ಹಲವು ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ಅವರ ಕ್ರೀಡಾ ಸಾಧನೆ ಹಾಗೂ ಕರ್ನಾಟಕದ ಕೀರ್ತಿ ಹೆಚ್ಚಿಸುವಲ್ಲಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ₹5 ಕೋಟಿ ವಿಶೇಷ ಪ್ರೋತ್ಸಾಹಧನ ನೀಡಬೇಕು ಎಂದು ಶಾಸಕ ಹರೀಶ್ ಪೂಂಜ ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸರ್ಕಾರದಿಂದ ಸೂಕ್ತ ಪ್ರೋತ್ಸಾಹ ದೊರೆಯುವುದರಿಂದ ಇನ್ನಷ್ಟು ಯುವ ಕ್ರೀಡಾಪಟುಗಳಿಗೆ ಉತ್ತೇಜನ ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *