ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಮಂಗಳವಾರ ಆಯೋಜಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಸಂಘದ ಹಿರಿಯ ಮಾರ್ಗದರ್ಶಕರಾಗಿದ್ದ ದಿವಂಗತ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ ಅವರಿಗೆ ಗೌರವ ನುಡಿನಮನ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು ಅವರು ಲೋಕೇಶ್ ಆಚಾರ್ಯ ಅವರ ಸೇವೆ ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಹಿರಿಯ ಸಹಕಾರಿ ಹರೀಶ ಆಚಾರ್ಯ ಮಂಗಳೂರು ಸೇರಿದಂತೆ ಸಮಾಜದ ಪ್ರಮುಖರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.




