Breaking
7 Oct 2026, Wed

ವಿಟ್ಲ: ಬ್ಯಾಂಕ್ ಉದ್ಯೋಗದ ಹೆಸರಿನಲ್ಲಿ ವಂಚನೆ; 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ವಿಟ್ಲ: ಬ್ಯಾಂಕಿನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರನ್ನು ನಂಬಿಸಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಸುಮಾರು 15 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.


ಬಲ್ನಾಡು ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ. ಬ್ಯಾಂಕ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರಿಂದ ಹಣ ಪಡೆದು, ಉದ್ಯೋಗವನ್ನೂ ಕೊಡಿಸದೆ ಹಣವನ್ನೂ ವಾಪಸ್ ನೀಡದೆ ವಂಚಿಸಿದ ಆರೋಪದಡಿ 2011ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಕಾರ್ಯಾಚರಣೆ ನಡೆಸಿದ ವಿಟ್ಲ ಪೊಲೀಸರು ಅ.5ರಂದು ಹಿಬ್ಬಾತುಲ್ಲನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *