Breaking
8 Oct 2026, Thu

ಧರ್ಮಸ್ಥಳದಲ್ಲಿ ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಆಘಾತ; 38 ವರ್ಷದ ವ್ಯಕ್ತಿ ಸಾವು

ಧರ್ಮಸ್ಥಳ: ಅಡಿಕೆ ಕೊಯ್ಯುವ ವೇಳೆ ದೋಟಿ ವಿದ್ಯುತ್ ತಂತಿಗೆ ತಗುಲಿ ವಿದ್ಯುತ್ ಆಘಾತಕ್ಕೊಳಗಾದ 38 ವರ್ಷದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝೀರ್ (38) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 4ರಂದು ನಝೀರ್ ಅವರು ಮನೆಯ ಸಮೀಪದ ಮರದಿಂದ ದೋಟಿ ಬಳಸಿ ಅಡಿಕೆ ಕೊಯ್ಯುತ್ತಿದ್ದ ವೇಳೆ ಪಕ್ಕದಲ್ಲಿ ಹಾದು ಹೋಗುತ್ತಿದ್ದ ವಿದ್ಯುತ್ ತಂತಿಗೆ ದೋಟಿ ಆಕಸ್ಮಿಕವಾಗಿ ತಗುಲಿದೆ. ಪರಿಣಾಮ ತೀವ್ರ ವಿದ್ಯುತ್ ಆಘಾತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಕ್ಟೋಬರ್ 8ರ ಗುರುವಾರ ಬೆಳಗ್ಗೆ ನಝೀರ್ ಮೃತಪಟ್ಟಿದ್ದಾರೆ.

ಘಟನೆ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *