Breaking
9 Oct 2026, Fri

ನಾವೂರು ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ತಪ್ಪಿತಸ್ಥರ ಶೀಘ್ರ ಬಂಧನಕ್ಕೆ ಶಶಿರಾಜ್ ಶೆಟ್ಟಿ ಆಗ್ರಹ

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಕಿಡಿಗೇಡಿಗಳು ಡೀಸೆಲ್ ಸುರಿದು ಬೆಂಕಿ ಹಚ್ಚಿರುವ ಕೃತ್ಯವನ್ನು ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ತೀವ್ರವಾಗಿ ಖಂಡಿಸಿದ್ದಾರೆ.

ವೈದ್ಯಕೀಯ ಸೇವೆಯ ಜೊತೆಗೆ ಆಧ್ಯಾತ್ಮಿಕ, ಧಾರ್ಮಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ. ಪ್ರದೀಪ್ ಅವರ ಕ್ಲಿನಿಕ್‌ಗೆ ಅಕ್ಟೋಬರ್ 6ರಂದು ದುರುದ್ದೇಶದಿಂದ ಬೆಂಕಿ ಹಚ್ಚಿರುವುದು ಅತ್ಯಂತ ಖಂಡನೀಯ ಹಾಗೂ ಆಘಾತಕಾರಿ ಘಟನೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕು. ಕೃತ್ಯ ಎಸಗಿದವರು ಯಾರೇ ಆಗಿದ್ದರೂ ಅವರನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಶಿರಾಜ್ ಶೆಟ್ಟಿ ಆಗ್ರಹಿಸಿದ್ದಾರೆ.

ಡಾ. ಪ್ರದೀಪ್ ಅವರೊಂದಿಗೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ತಂಡ ಸದಾ ಇರಲಿದ್ದು, ಅವರಿಗೆ ಅಗತ್ಯ ಬೆಂಬಲ ನೀಡಲಿದೆ ಎಂದು ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *