Breaking
9 Oct 2026, Fri

ವರ್ಣ ಸ್ಕೂಲ್ ಆಫ್ ಆರ್ಟ್ಸ್‌ನಲ್ಲಿ ‘Blooming Feathers’ ಚಿತ್ರಕಲಾ ಪ್ರದರ್ಶನ

ಮಂಗಳೂರು: ವೆಲೆನ್ಸಿಯಾದಲ್ಲಿರುವ ವರ್ಣ ಸ್ಕೂಲ್ ಆಫ್ ಆರ್ಟ್ಸ್ ಸಂಸ್ಥೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳೇ ರಚಿಸಿದ ವಿವಿಧ ಬಗೆಯ ಚಿತ್ರಕಲಾಕೃತಿಗಳ ಪ್ರದರ್ಶನ ‘Blooming Feathers’ ಆಯೋಜಿಸಲಾಗಿದೆ.

ಅ.11ರಂದು ಮಧ್ಯಾಹ್ನ 3 ಗಂಟೆಯಿಂದ ವರ್ಣ ಸ್ಕೂಲ್ ಆಫ್ ಆರ್ಟ್ಸ್ ಸಂಸ್ಥೆಯ ಆವರಣದಲ್ಲಿ ಚಿತ್ರಕಲಾ ಪ್ರದರ್ಶನ ನಡೆಯಲಿದೆ. ಮಕ್ಕಳ ಕಲ್ಪನೆ ಹಾಗೂ ಸೃಜನಶೀಲತೆಯಿಂದ ಮೂಡಿಬಂದ ವಿಭಿನ್ನ ಕಲಾಕೃತಿಗಳನ್ನು ವೀಕ್ಷಿಸಲು ಕಲಾಸಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.

ಕಲಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮಕ್ಕಳ ಕಲಾ ಪ್ರತಿಭೆಯನ್ನು ಪ್ರೋತ್ಸಾಹಿಸುವಂತೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *