Breaking
10 Oct 2026, Sat

ಜಿಲ್ಲಾಮಟ್ಟದ ಭಾಷಣ, ಚಿತ್ರಕಲಾ ಸ್ಪರ್ಧೆಯಲ್ಲಿ ಬೆಳ್ತಂಗಡಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಮಂಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ವೇಣೂರು ಸರ್ಕಾರಿ ಪ್ರೌಢಶಾಲೆಯ ಧನುಶ್ರೀ ಎಸ್. ಕುಲಾಲ್ ಪ್ರಥಮ ಸ್ಥಾನ ಹಾಗೂ ಉಜಿರೆ ಎಸ್‌ಡಿಎಂ ಶಾಲೆಯ ಶೃತ ಆಳ್ವ ದ್ವಿತೀಯ ಸ್ಥಾನ ಪಡೆದರು.

ಕಾಲೇಜು ವಿಭಾಗದಲ್ಲಿ ಚಾರ್ಮಾಡಿಯ ಅಂಬಿಕಾ ವಿದ್ಯಾಲಯದ ಪೂಜಿತಾ ಎಸ್. ಪ್ರಥಮ ಸ್ಥಾನ ಹಾಗೂ ಉಜಿರೆ ಎಸ್‌ಡಿಎಂ ಕಾಲೇಜಿನ ದೀಪಕ್ ಕೂತ್ಲೂರು ದ್ವಿತೀಯ ಸ್ಥಾನ ಪಡೆದುಕೊಂಡರು.

ಚಿತ್ರಕಲಾ ಸ್ಪರ್ಧೆಯ ಕಿರಿಯರ ವಿಭಾಗದಲ್ಲಿ ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯ ಶ್ರೀದೇವಿ ಆಚಾರ್ಯ ಪ್ರಥಮ ಸ್ಥಾನ ಗಳಿಸಿದರೆ, ಹಿರಿಯರ ವಿಭಾಗದಲ್ಲಿ ಉಜಿರೆ ಎಸ್‌ಡಿಎಂ ಆಂಗ್ಲಮಾಧ್ಯಮ ಶಾಲೆಯ ಅನ್ವಿತ್ ದ್ವಿತೀಯ ಸ್ಥಾನ ಪಡೆದರು.

ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದ ಎಲ್ಲಾ ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗೂ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *