Breaking
10 Oct 2026, Sat

ಕಂಕನಾಡಿಯಲ್ಲಿ ಎರಡು ತಿಂಗಳ ಯಕ್ಷಗಾನ ತರಬೇತಿ ಶಿಬಿರ ಆರಂಭ

ಮಂಗಳೂರು: ಕಂಕನಾಡಿಯ ಓಂಕಾರೇಶ್ವರ ಹವ್ಯಾಸಿ ಯಕ್ಷಕಲಾವೃಂದದ ಆಶ್ರಯದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಕಾರದೊಂದಿಗೆ ಎರಡು ತಿಂಗಳ ಯಕ್ಷಗಾನ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.

ಮನಪಾ ಕಂಕನಾಡಿ ಬಿ ವಾರ್ಡ್‌ನ ನಿಕಟಪೂರ್ವ ಸದಸ್ಯ ಟಿ. ಪ್ರವೀಣ್ ಚಂದ್ರ ಆಳ್ವ ಅವರು ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದ ಕಂಕನಾಡಿ ಪರಿಸರದಲ್ಲಿ ಓಂಕಾರೇಶ್ವರ ಸಂಸ್ಥೆಯು ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯ ಎಂದರು. ಹಿರಿಯ ಕಲಾವಿದರ ಸನ್ಮಾನ, ಯಕ್ಷಗಾನ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಕಲೆಯನ್ನು ಉಳಿಸಿ ಬೆಳೆಸುತ್ತಿರುವ ಸಂಸ್ಥೆಯ ಕಾರ್ಯ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಮೋಹನ್ ಕೊಪ್ಪಳ ಅವರು ಶಿಬಿರಕ್ಕೆ ಶುಭ ಹಾರೈಸಿದರು.

ತರಬೇತಿ ಶಿಬಿರದಲ್ಲಿ ಮುಖ್ಯ ಶಿಕ್ಷಕರಾಗಿ ಸುನಿಲ್ ಪಲ್ಲಮಜಲು ಹಾಗೂ ಸಹ ಶಿಕ್ಷಕಿಯಾಗಿ ಶರಣ್ಯ ತರಬೇತಿ ನೀಡಲಿದ್ದಾರೆ. ಸಂಸ್ಥೆಯ ಅಧ್ಯಕ್ಷೆ ನಿರಂಜಯ ಸಾಲಿಯಾನ್ ಉಪಸ್ಥಿತರಿದ್ದರು. ಶರ್ಮಿಳಾ ಕಾರ್ಯಕ್ರಮ ನಿರೂಪಿಸಿದರು.

ಯಕ್ಷಗಾನ ಕಲೆಯಲ್ಲಿ ಆಸಕ್ತಿ ಹೊಂದಿರುವ ಸುಮಾರು 20 ವಿದ್ಯಾರ್ಥಿಗಳು ತರಬೇತಿ ಶಿಬಿರಕ್ಕೆ ನೋಂದಾಯಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *