ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




