ಕಲ್ಕಡ್ಕ: ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ಕಟ್ಟೆಮಾರ್‌ನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 18ರಂದು ಭಾನುವಾರ ಬೆಳಿಗ್ಗೆ ಚಂಡಿಕಾ ಹೋಮ ನಡೆಯಲಿದೆ.

ಅಂದು ಮಧ್ಯಾಹ್ನ 2 ಗಂಟೆಗೆ ಪ್ರಸಿದ್ಧ ಯಕ್ಷಗಾನ ಕಲಾವಿದರ ಕೂಡುವಿಕೆಯಲ್ಲಿ ‘ಶಾಂಭವಿ ವಿಜಯ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಕ್ಷೇತ್ರದಲ್ಲಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕ್ಷೇತ್ರದ ಮುಖ್ಯಸ್ಥರಾದ ಮನೋಜ್ ಕುಮಾರ್ ಕಟ್ಟೆಮಾರ್ ತಿಳಿಸಿದ್ದಾರೆ.






