ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಆಘಾತ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅಕ್ಟೋಬರ್ 12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ.

ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ವಿದ್ಯುತ್ ಆಘಾತ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.






