ಬಂಟ್ವಾಳ: ಕೊಯಿಲ ಕುದ್ಮಾಣಿ ನಿವಾಸಿ, ಬಿಜೆಪಿ ಕಾರ್ಯಕರ್ತ ತಿಮ್ಮಪ್ಪ ಪೂಜಾರಿ (53) ಅವರು ಅಸೌಖ್ಯದಿಂದ ಮಂಗಳವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.

ವೃತ್ತಿಯಲ್ಲಿ ವಾಹನ ಚಾಲಕರಾಗಿದ್ದ ಅವರು ಕೊಯಿಲ ಶಾರದೋತ್ಸವ ಸಮಿತಿಯ ಸದಸ್ಯರಾಗಿ ಹಾಗೂ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.



