ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ, ಶ್ರೀ ಶಾರದ ಸೇವಾ ಟ್ರಸ್ಟ್ ಹಾಗೂ ದಶಮಾನೋತ್ಸವ ಸಮಿತಿಯ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ದಶಾರದ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವು ಮೂಡುಪಡುಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

ಅಕ್ಟೋಬರ್ 18 ಮತ್ತು 19ರಂದು ನಡೆಯಲಿರುವ ಶ್ರೀ ಶಾರದಾ ಪೂಜಾ ದಶಮಾನೋತ್ಸವ ‘ದಶಾರದ ಸಂಭ್ರಮ-2026’ರ ಅಂಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಪ್ರತಿಭೆ ಹಾಗೂ ಸಾಂಸ್ಕೃತಿಕ ಆಸಕ್ತಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

ಮಂಗಳೂರು ಹಾಪ್‌ಕಾಮ್ಸ್ ನಿರ್ದೇಶಕ ಕೆ. ಲಕ್ಷ್ಮೀನಾರಾಯಣ ಉಡುಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅರಳ ಜನಹಿತಾಯ ಶಾಲೆಯ ಸಂಚಾಲಕ ರಂಜನ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಿದ್ಧಕಟ್ಟೆ ಫಾಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷೆ ಟೀನಾ ಡಿಕೋಸ್ತ, ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಜೋಶಿ ಮುಳ್ಳುಂಜ, ಚೆನ್ನೈತ್ತೋಡಿ ಕ್ಲಸ್ಟರ್ ಸಿಆರ್‌ಪಿ ಸುನೀಲ್ ಸಿಕ್ವೇರಾ, ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಗಿರೀಶ್ ಸಾಲ್ಯಾನ್ ಹೆಗ್ಗಡೆಬೆಟ್ಟು ಗುತ್ತು, ವಾಮದಪದವು ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಹರಿಪ್ರಸಾದ್ ಆರ್., ಎಸ್‌ಡಿಎಂಸಿ ಅಧ್ಯಕ್ಷೆ ಶಾಲಿನಿ ಯತೀಶ್ ಪೂಜಾರಿ, ಬಂಟ್ವಾಳ ಬಾಲಗೋಕುಲ ಪ್ರಮುಖ ಹರೀಶ್ ಕುಲಾಲ್ ಜಾರಬೆಟ್ಟು, ಉದ್ಯಮಿಗಳಾದ ನೆಲ್ವಿಸ್ಟರ್ ಪಿಂಟೋ ಮತ್ತು ಸಿಲ್ವೆಸ್ಟರ್ ಲಸ್ರಾದೋ, ಚಿತ್ರಕಲಾ ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ, ಮುರಲೀಕೃಷ್ಣ ರಾವ್, ಮುರಲೀಧರ ಆಚಾರ್ಯ ಹಾಗೂ ಸಂಸ್ಕೃತ ಶಿಕ್ಷಕ ಮುರಲೀಧರ ಆಚಾರ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಿತಿಯ ಪ್ರಮುಖರಾದ ಟಿ. ಹರೀಂದ್ರ ಪೈ, ಮೋಹನ್ ಶೆಟ್ಟಿ ನರ್ವಲ್ದಡ್ಡ, ಸುಧೀಂದ್ರ ಶೆಟ್ಟಿ ಎರ್ಮೆನಾಡು, ಸತೀಶ್ ಪೂಜಾರಿ ಬೆನಕ, ಶೇಖರ ಪೂಜಾರಿ ಅಗಲ್ದೋಡಿ ಮತ್ತು ಶಂಕರ ಶೆಟ್ಟಿ ಬೆದ್ರಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕು ಮಟ್ಟದ ವಿದ್ಯಾರ್ಥಿಗಳಿಗೆ ಹಾಗೂ ಮುಕ್ತ ವಿಭಾಗದಲ್ಲಿ ಚಿತ್ರಕಲೆ, ಆಶುಭಾಷಣ, ಛದ್ಮವೇಷ, ರಂಗೋಲಿ ಮತ್ತು ರಸಪ್ರಶ್ನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಭಾಗವಹಿಸಿದ ಸ್ಪರ್ಧಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಶ್ರೀ ಶಾರದ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ರಾಮಕೃಷ್ಣ ಎಸ್. ಸ್ವಾಗತಿಸಿದರು. ಕಾರ್ಯದರ್ಶಿ ದಯಾನಂದ ಎಸ್. ಎರ್ಮೆನಾಡು ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋಪಾಲ ಅಂಚನ್ ವಂದಿಸಿದರು.


