ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕುಂಜೆ–ಅಲೆತ್ತೂರು ಪಂಜುರ್ಲಿ ದೈವಸ್ಥಾನ ಸಂಪರ್ಕ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಹಾಗೂ ಕಿರು ಸೇತುವೆಯನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಉದ್ಘಾಟಿಸಿದರು.

ರೂ. 20 ಲಕ್ಷ ವೆಚ್ಚದಲ್ಲಿ ಸಂಪರ್ಕ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿ ಹಾಗೂ ರೂ. 30 ಲಕ್ಷ ವೆಚ್ಚದಲ್ಲಿ ಕಿರು ಸೇತುವೆ ನಿರ್ಮಾಣಗೊಂಡಿದೆ.
ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಯಲ್ಲಿ ರಸ್ತೆ ಸಂಪರ್ಕ ಪ್ರಮುಖ ಪಾತ್ರ ವಹಿಸುತ್ತದೆ. ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಸದಸ್ಯ ಎ. ಗೋವಿಂದ ಪ್ರಭು, ಬಿಜೆಪಿ ಬೂತ್ ಅಧ್ಯಕ್ಷ ಶಿವರಾಜ್ ಕೈಕುಂಜೆ, ನಿತಿನ್ ಅಲೆತ್ತೂರು, ನಗರ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಟೈಲರ್ ಕೈಕಂಬ, ಶಕ್ತಿ ಕೇಂದ್ರದ ಪ್ರಮುಖ್ ನವೀನ್ ಶೆಟ್ಟಿ ಕೈಕಂಬ, ಮಂಗಳ ಫ್ರೆಂಡ್ಸ್ ಅಲೆತ್ತೂರು ಅಧ್ಯಕ್ಷ ಶ್ರೀಧರ್ ಶೆಟ್ಟಿ, ಅಶ್ವಥ್ ಶೆಟ್ಟಿ ಅಲೆತ್ತೂರು, ವಿಜಯ್ ಅಲೆತ್ತೂರು, ಪ್ರಣಾಮ್ ರಾಜ್, ಮಹೇಶ್ ಜುಮಾದಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.




