ಮಾಣಿ: ಸ್ವ-ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ವತಿಯಿಂದ ವಿಟ್ಲ ತಾಲೂಕಿನ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ್ಞಾನವಿಕಾಸ ಕಾರ್ಯಕ್ರಮದಡಿ ಸ್ವ-ಉದ್ಯೋಗ ಪ್ರೇರಣಾ ಶಿಬಿರ ನಡೆಯಿತು.

ಪರಮಪೂಜ್ಯ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಡಾ. ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಜನೆಯ ವತಿಯಿಂದ ಆಯೋಜಿಸಲಾದ ಶಿಬಿರದಲ್ಲಿ, ರುಡ್ಸೆಟ್ ಸಂಸ್ಥೆಯ ಕಾರ್ಯಚಟುವಟಿಕೆಗಳು, ಸ್ವ-ಉದ್ಯೋಗದ ಮಹತ್ವ ಹಾಗೂ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಇರುವ ವಿವಿಧ ಅವಕಾಶಗಳ ಕುರಿತು ಮಾಹಿತಿ ನೀಡಲಾಯಿತು.

ಸ್ವ-ಉದ್ಯೋಗದ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸುವುದು ಮತ್ತು ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಕುರಿತು ಶಿಬಿರದಲ್ಲಿ ಅರಿವು ಮೂಡಿಸಲಾಯಿತು.

ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ ಜ್ಞಾನವಿಕಾಸದ ತಾಲೂಕು ಸಮನ್ವಯಾಧಿಕಾರಿ ದೀಪಾ, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷೆ ವನಿತಾ ಹಾಗೂ ಸೇವಾಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು.





