Breaking
14 Oct 2026, Wed

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಶಾಸಕ ರಾಜೇಶ್ ನಾಯ್ಕ್ ಸೇವಾರ್ಥ ಚಂಡಿಕಾ ಯಾಗ

ಪೊಳಲಿ: ನವರಾತ್ರಿ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ, ಅ.14ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಸೇವಾರ್ಥವಾಗಿ ಚಂಡಿಕಾ ಯಾಗ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿತು.

ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಾಜಿ ಶಾಸಕರಾದ ರುಕ್ಮಯ ಪೂಜಾರಿ ಮತ್ತು ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಉದಯ ಕುಮಾರ್ ರಾವ್, ಗೋವಿಂದ ಪ್ರಭು, ಬಿಜೆಪಿ ಮಂಡಲ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ ಮತ್ತು ಶಿವಪ್ರಸಾದ್ ಕರೋಪಾಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಚಂಡಿಕಾ ಯಾಗದ ಬಳಿಕ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12 ಗಂಟೆಗೆ ಶ್ರೀ ರಾಜರಾಜೇಶ್ವರಿ ದೇವಿಗೆ ಮಹಾಪೂಜೆ ನೆರವೇರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.

ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

Leave a Reply

Your email address will not be published. Required fields are marked *